ಮುಂದಿನ ಎರಡು ವರ್ಷ ನಾನೇ ಸಿಎಂ: ಬಿಎಸ್ ವೈ ಖಡಕ್ ಸಂದೇಶ

ಬೆಂಗಳೂರು| Krishnaveni K| Last Modified ಶನಿವಾರ, 12 ಜೂನ್ 2021 (09:09 IST)
ಬೆಂಗಳೂರು: ಮುಂದಿನ ಎರಡು ವರ್ಷಗಳಿಗೆ ನಾನೇ ಸಿಎಂ ಎಂದು ಬಿಎಸ್ ವೈ ಎದುರಾಳಿಗಳಿಗೆ ಖಡಕ್ ಸಂದೇಶ ಕೊಟ್ಟಿದ್ದಾರೆ. ಹೈಕಮಾಂಡ್ ಭರವಸೆ ಬೆನ್ನಲ್ಲೇ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ.
 > ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಹಿನ್ನಲೆಯಲ್ಲಿ ಬೇಸತ್ತ ಯಡಿಯೂರಪ್ಪ ಹೈಕಮಾಂಡ್ ಬಯಸಿದರೆ ರಾಜೀನಾಮೆ ನೀಡಲೂ ಸಿದ್ಧ ಎಂದಿದ್ದರು. ಇದು ಭಾರೀ ಕೋಲಾಹಲಕ್ಕೆ ದಾರಿಯಾಗಿತ್ತು.>   ಈ ನಡುವೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಸಿಎಂ ಸ್ಥಾನ ಅಬಾಧಿತ ಎಂದ ಬೆನ್ನಲ್ಲೇ ಯಡಿಯೂರಪ್ಪ ಮಾಧ್ಯಮಗಳ ಮುಂದೆ ಈ ಖಡಕ್ ಸಂದೇಶ ರವಾನಿಸಿದ್ದಾರೆ. ಇದರಿಂದಾಗಿ ಸಿಎಂ ಬದಲಾವಣೆ ಕುರಿತ ಊಹಾಪೋಹಗಳಿಗೆ ಸದ್ಯಕ್ಕೆ ತೆರೆ ಬಿದ್ದಿದೆ.ಇದರಲ್ಲಿ ಇನ್ನಷ್ಟು ಓದಿ :