ಕಲಬುರ್ಗಿ: ಯಡಿಯೂರಪ್ಪ ಅಲ್ಲ ಬೇರೆ ಯಾರೇ ಬಲಿಷ್ಠ ನಾಯಕರು ಸ್ಪರ್ಧಿಸಿದರು ಹೆದರುವುದಿಲ್ಲ. ಓಡಿ ಹೋಗುವುದು ಕಾಂಗ್ರೆಸ್ ಅಥವಾ ಉಮಾಶ್ರೀ ಜಾಯಮಾನದಲ್ಲಿ ಇಲ್ಲ ಎಂದು ಸಚಿವೆ ಉಮಾಶ್ರೀ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎದುರಾಳಿ ಯಾರೇ ಆದರೂ ತೆರದಾಳ ಕ್ಷೇತ್ರ ಬದಲಾವಣೆ ಪ್ರಶ್ನೆಯೇ ಇಲ್ಲ. 2008ರ ಚುನಾವಣೆಯಲ್ಲಿ ಉಮಾಶ್ರೀ ಗೆಲುವು ಸಾಧಿಸಿದರೆ ಅವರು ಕ್ಷೇತ್ರದಲ್ಲಿ ಇರುವುದಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಆದರೂ ಅಲ್ಲಿಯೇ ಇದ್ದು ಗೆಲುವು ಸಾಧಿಸಿ ತೋರಿಸಿದ್ದೇನೆ. ಸೋಲು