ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಜನರ ತೀರ್ಪನ್ನು ನಾನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ. ಬಿಜೆಪಿಯ ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶನಿವಾರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಇದರ ಬೆನ್ನಲೇ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ.ಕಾಂಗ್ರೆಸ್ ಬಹುಮತದಿಂದ ಗೆಲುವು ಸಾಧಿಸುತ್ತಿದ್ದಂತೆ