ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ನನ್ನನ್ನು ಮಹಾನ್ ಭ್ರಷ್ಟ ಎಂದು ಟೀಕಿಸುತ್ತಿದ್ದಾರೆ. ಇದನ್ನೇ ಮುಂದುವರಿಸಿದಲ್ಲಿ ಅವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.