ಚಿಕ್ಕಬಳ್ಳಾಪುರ : ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಉನ್ನತ ಶಿಕ್ಷಣ ಸಚಿವ