ಹಣಬಲ, ಅಧಿಕಾರದ ಬಲದಿಂದ ಕಾಂಗ್ರೆಸ್ ಚುನಾವಣೆ ಗೆದ್ದಿದೆ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಗೆ ಎರಡು ದಿನ ಮುಂಚೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಪೊಲೀಸ್ ಬಲವನ್ನು ಬಳಸಿಕೊಂಡು 1.25 ಲಕ್ಷ ಜನರಿಗೆ ಮನೆ ಮನೆಗೆ ಹಣ ಹಂಚುವಲ್ಲಿ ನೆರವಾಗಿರುವುದು ವರದಿಯಾಗಿದೆ ಎಂದು ಆರೋಪಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ. ಆದರೆ, ಚುನಾವಣೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. 13 ಚುನಾವಣೆಗಳನ್ನು ಎದುರಿಸಿದ್ದೇನೆ ಇನ್ನಷ್ಟು ಚುನಾವಣೆ ಎದುರಿಸುವ