ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ನನಗೆ ತಿಳಿದಿಲ್ಲ. ನನಗೆ ತಿಳಿಯದ ವಿಷಯಗಳ ಬಗ್ಗೆ ಐ ಡೋಂಟ್ ರಿಯಾಕ್ಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಅಧಿಕೃತ ಆಹ್ವಾನ ನೀಡಿದ್ದರು. ಶೀಘ್ರದಲ್ಲಿಯೇ ಎಸ್.ಎಂ. ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ ಎಂದು ಯಡಿಯೂರಪ್ಪ ತಿಳಿಸಿದ್ದರು.