ತುಮಕೂರು : ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ವಿಚಾರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ತುಂಬಾ ಹಳೇಯದು. ಯಾವಾಗ ಮಾತನಾಡಿದ್ದೀನಿ ಅನ್ನೋದು ನನಗೆ ನೆನಪಿಲ್ಲ. ಆಡಿಯೋದಲ್ಲಿ ಇರುವ ಧ್ವನಿ ನನ್ನದೆ.ಆಡಿಯೋ ರೆಕಾರ್ಡಿಂಗ್ ಮಾಡಿದ ವ್ಯಕ್ತಿ ವಿರುದ್ಧ ದೂರು ನೀಡುತ್ತೇನೆ. ಗೊತ್ತಿಲ್ಲದೇ ಕಾಲ್ ರೆಕಾರ್ಡ್ ಮಾಡುವುದು ಕೂಡ ಅಪರಾಧವಾಗಿದೆ. ಹಾಗಾಗಿ ಪ್ರಸಾರ ಮಾಡಿದ