ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡ್ತಿನಿ -ಸಿಎಂ

ಬೆಂಗಳೂರು| pavithra| Last Modified ಶುಕ್ರವಾರ, 18 ಜನವರಿ 2019 (14:28 IST)
ಬೆಂಗಳೂರು : ಸಿದ್ದಗಂಗಾ ಶ್ರೀ ಡಾ. ಶಿವಕುಮಾರಸ್ವಾಮೀಜಿಗಳಿಗೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಶಿವಕುಮಾರಸ್ವಾಮೀಜಿ ಅವರಿಗೆ 2006 ರಲ್ಲೇ ಸಿಎಂ ಆಗಿದ್ದಾಗ ಭಾರತ ರತ್ನ ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೆ, ಈಗಲೂ ಕೇಂದ್ರಕ್ಕೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡುವಂತೆ ಪತ್ರ ಬರೆದು ಮನವಿ ಮಾಡುತ್ತೇನೆ ‘ಎಂದು ಹೇಳಿದ್ದಾರೆ.


ಹಾಗೇ ‘ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ನಾನು ಮಠಕ್ಕೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತೇನೆ. ಶ್ರೀಗಳು ಇಚ್ಚಾರಣಿಗಳು, ಪವಾಡ ಪುರಷರು, ಅವರಿಂದ ಆಗಬೇಕಾದ ಕೆಲಸಗಳು ಇನ್ನೂ ಇವೆ. ಶ್ರೀಗಳ ಆರೋಗ್ಯ ಮತ್ತಷ್ಟು ಚೇತರಿಕೆ ಆಗುತ್ತೆ. ಭಕ್ತರ ಆಸೆ ಭಗವಂತ ಈಡೇರಿಸುತ್ತಾನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :