ರಾಷ್ಟ್ರಪತಿಯಾಗುವುದಕ್ಕೆ ಅನೇಕ ಮುಖಂಡರಿಂದ ಕರೆ ಬಂದಿವೆ.ಆದರೆ ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನನ್ನ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸಬೇಕು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು ದೀನ ದಲಿತರ, ಶೋಷಿತರ, ರೈತರ ಏಳಿಗೆಗಾಗಿ ಶ್ರಮಿಸಬೇಕು ಎನ್ನುವುದೇ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ತಮ್ಮದೇ ಆದ ಹಿತಾಸಕ್ತಿಗಳಿರುತ್ತವೆ. ಆದ್ದರಿಂದ ರಾಜ್ಯದ ಏಳಿಗೆ ಸಾಧ್ಯವಿಲ್ಲ.