ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಕೇಳಿಕೊಂಡರೆ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ. ಏಕೆಂದರೆ, ಚಿಕ್ಕವರು ಸಹ ರಾಜಕೀಯದಲ್ಲಿ ಬೆಳೆಯಲಿ ಎನ್ನುವುದು ನಮ್ಮ ಆಶಯ ಎಂದು ಮಾಜಿ ಸಚಿವ ಹಾಗೂ ನಟ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಪತ್ರದ ಮೂಲಕ ವಿವರಿಸಿದ್ದೇನೆ. ಅಧಿವೇಶನದಲ್ಲಿ ಇಲ್ಲಸಲ್ಲದ ಚರ್ಚೆಗಳೆ ನಡೆಯುತ್ತವೆ. ಹೀಗಾಗಿ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.