ಮೈಸೂರು : ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ.ಅವನು ಜೆಡಿಎಸ್ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು