ಮಂಗಳೂರು : ಯಕ್ಷಗಾನದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು.ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್ ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು