ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ಕೇಂದ್ರಗಳು ಹಾಗೂ ಚಿಕಿತ್ಸಾ ಕೇಂದ್ರಗಳಲ್ಲಿ ದೊರೆಯುವ ಆರೋಗ್ಯ ಸೌಲಭ್ಯಗಳ ಕುರಿತು ಅರಿವು ಅಗತ್ಯವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು.ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಅವಕಾಶವಿದ್ದರೂ ಸಹ ವಿದ್ಯಾವಂತ ಮಹಿಳೆಯರು ಪರೀಕ್ಷೆಗೊಳಪಡಲು ಹಿಂಜರಿಯುತ್ತಿದ್ದಾರೆ. ಆದರೆ ಹಿಂಜರಿಕೆ ಬಿಟ್ಟು ಪ್ರಾರಂಭಿಕ ಹಂತದಲ್ಲೇ ರೋಗವನ್ನು ಗುರುತಿಸಿ ಚಿಕಿತ್ಸೆ ಪಡೆಯಬೇಕು.ಯಾವುದೇ ಕಾಯಿಲೆ ಇರಲಿ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಎಚ್ಚರವಹಿಸುವುದು