ಮಾಜಿ ಸಚಿವ ಹಾಗೂ ನಟ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬರುವುದಾದರೆ ನಮ್ಮ ಸ್ವಾಗತವಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಅವರು ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ಕೊಟ್ಟಿದ್ದಾರೆ. ಇದೀಗ ಅವರು ಕಾಂಗ್ರೆಸ್ ನಡೆಸಿಕೊಂಡ ರೀತಿಯಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ. ಪಕ್ಷತೀತವಾಗಿ ನಾನು ಅವರ ಅಭಿಮಾನಿ. ಅವರ ಅಭಿಮಾನಿಯಾಗಿ ಅವರನ್ನು ಬಿಜೆಪಿ