ರಾಮನಗರ : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ವಿಚಾರವಾಗಿ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದ ಕಬ್ಬಾಳು ಗ್ರಾಮದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ