ಇಲ್ಲಿಯವರೆಗೂ ಕಾಂಗ್ರೆಸ್ ಸರಕಾರ ಹೆಂಡ ಹಂಚುವ ಮೂಲಕ ಮತ ಪಡೆಯುತ್ತಿದೆ, ಆದರೆ, ನಾವು ಹಣ, ಹೆಂಡ ನೀಡಿ ಮತ ಪಡೆಯುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಶೋಷಿತ ಸಮುದಾಯಗಳಿಗೆ ಹೆಚ್ಚು ನೆರವು ನೀಡಲಾಗುತ್ತೆ ಎಂದು ವಿಧಾನ ಪರಿಷತ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಘಟಕ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ