Widgets Magazine

ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ತೆಗೆದ್ರೆ ಪ್ರಾಣ ಬಿಡ್ತಾರೆ: ಕುಮಾರಸ್ವಾಮಿ

ಹುಬ್ಬಳ್ಳಿ| Vinod| Last Modified ಬುಧವಾರ, 25 ಜನವರಿ 2017 (18:42 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಿದರೆ, ಅವರು ಅಲ್ಲೇ ಪ್ರಾಣ ಬಿಡುತ್ತಾರೆ. ಅವರು ಅಷ್ಟೊಂದು ನಿಷ್ಠಾವಂತರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅವರು, ನನ್ನ ಸಂಪುಟದಲ್ಲಿ ಸೇವೆ ಸಲ್ಲಿಸಿರುವುದನ್ನು ಗಮನಿಸಿದ್ದೇನೆ. ಅವರು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ. ಒಂದು ವೇಳೆ ಅವರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಿದರೆ, ಅವರು ಅಲ್ಲೇ ಪ್ರಾಣ ಬಿಡುತ್ತಾರೆ. ಅವರು ಅಷ್ಟೊಂದು ನಿಷ್ಠಾವಂತರು ಎಂದು ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದರು.
ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಲು ಹುನ್ನಾರ ನಡೆಸಿದ್ದಾರೋ, ಅವರೇ ಈ ಹಿಂದೆ ಬಿಜೆಪಿ ಪಕ್ಷದಿಂದ ಹೊರ ಬಂದು ಜೆಡಿಎಸ್ ಬಾಗಿಲು ತಟ್ಟಿದ್ದರು ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಜೊತೆ ಚೆಲ್ಲಾಟವಾಡುತ್ತಿವೆ. ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್‌ ಏನು ಮಾಡುತ್ತಿದ್ದಾರೆ. ಕರ್ನಾಟಕ ಈ ದೇಶದ ಭೂಪಟದಲ್ಲಿ ಇದೆ ಎಂಬುದನ್ನ ಕೇಂದ್ರ ಸರ್ಕಾರ ಮರೆತಂತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :