ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಬಿಜೆಪಿಯವರು ದಾಖಲೆ ನೀಡಲಿ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಆರ್.ಅಶೋಕ್ ಗೃಹ ಸಚಿವರಾಗಿದ್ದವರು. ಅವರು ದಾಖಲೆ ನೀಡಿದರೆ ಇನ್ನೂ ಅನುಕೂಲವಾಗಲಿದೆ. ದಾಖಲೆ ನೀಡಿದ ಬಳಿಕ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ. ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತನಿಖೆಗೆ ಹೈಕೋರ್ಟ್ ನಲ್ಲಿ ಮಧ್ಯಂತರ ತಡೆ ಸಿಗುವುದು ಸಹಜ. ಹಾಗೆಂದ ಮಾತ್ರಕ್ಕೆ