ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕಾಯುವುದಿಲ್ಲ. ನಾನೇ ಬೀದಿಗಳಿದು ಹೋರಾಟ ನಡೆಸುತ್ತೇನೆ. ರಾಜ್ಯ ಸರಕಾರಕ್ಕೆ ಗಂಡಸ್ತನವಿದ್ದರೇ ನನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ನೇರ ಸವಾಲ್ ಎಸೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರಿಗೆ ಮನುಷ್ಯತ್ವ ಇಲ್ವಾ? ಗೃಹ ಸಚಿವರೇ ನೀವು ಟಿವಿಯಲ್ಲಿ ಬಿತ್ತರವಾಗುತ್ತಿರುವ ಸುದ್ದಿಯನ್ನು ನೋಡಿಲ್ಲವೇ?