ಮೈಸೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ ಬಜರಂಗದಳವನ್ನು ಬ್ಯಾನ್ ಮಾಡೋದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರವಾಗಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬಜರಂಗದಳವನ್ನು ಬ್ಯಾನ್ ಮಾಡಲು ಅವರಿಗೆ ಅವಕಾಶ ಕೊಡುವವರು ಯಾರು? ಬಜರಂಗದಳವು ದೇಶಭಕ್ತಿಯ ಸಂಘಟನೆ. ಹಿಂದೂ ಪರ ಕಾಳಜಿ ಇರುವ ಸಂಘಟನೆ. ಒಂದು ಸಂಘಟನೆ ಬಗ್ಗೆ ಕಾಂಗ್ರೆಸ್