ಹಾಸನ : ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುವಂತಹವರು. ಅವರು ಏನು ಹೇಳಿದರೂ ಆಶೀರ್ವಾದ ಅನ್ಕೊತೀನಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ಅವನ್ಯಾವನೋ ಶಾಸಕ 50 ಸಾವಿರ ಲೀಡ್ನಿಂದ ಗೆಲ್ತೀನಿ ಅಂತ ಚಾಲೆಂಜ್ ಹಾಕ್ತಾನೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿಗೆ ನಯವಾಗಿಯೇ ತಿರುಗೇಟು ಕೊಟ್ಟ ಪ್ರೀತಂ ಗೌಡ, ಅವರು ವೈಯುಕ್ತಿಕವಾಗಿ ನನ್ನ ಬಗ್ಗೆ ಮಾತಾನಾಡಿದರೆ ಅವರು ಯಾವಾಗಲೂ ನನ್ನ ಹಿತೈಷಿಯೇ.