ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದರೇ ಟ್ರೈನಿಗಳನ್ನು ನೇಮಕ ಮಾಡಿಕೊಂಡು ಸಾರಿಗೆ ಬಸ್ ಸಂಚಾರ ಆರಂಭಿಸಲು ಸರಕಾರ ಚಿಂತಿಸುತ್ತಿದೆ ಎಂದು ಸಾರಿಗೆ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ರಾಜ್ಯ ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ಮುಷ್ಕರ ನಿರತ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರಕಾರ, ತರಬೇತಿ ಪಡೆಯುತ್ತಿರುವರನ್ನೇ