ಜಂತಕಲ್ ಮೈನಿಂಗ್ ಪ್ರಕರಣ ವಿಚಾರದಲ್ಲಿ ನಾನು ತಪ್ಪಿತಸ್ಥ ಎಂದು ಪ್ರೂವ್ ಆದ್ರೆ ಸಾರ್ವಜನಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪ್ರಕರಣದಲ್ಲಿ ನಾನು ಕಿಕ್ ಬ್ಯಾಕ್ ಪಡೆದಿದ್ದೇನೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜ ಎಂದು ಸಾಬೀತಾದಲ್ಲಿ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಸವಾಲ್ ಹಾಕಿದ್ದಾರೆ. ಜಂತಕಲ್ ಮೈನಿಂಗ್ ಪ್ರಕರಣ ನಡೆದೇ ಇಲ್ಲ ಎಂದು ಹಲವಾರು ಬಾರಿ ಹೇಳಿದ್ದೇನೆ. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ.