ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಬಿಜೆಪಿಗೆ ಬಂದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತೆ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣ ಅವರ ಮನಸ್ಸಿನಲ್ಲಿ ಏನಿದೆ ಗೊತ್ತಿಲ್ಲ. ಅವರು ಸಮಯ ನೀಡಿದರೆ ಭೇಟಿಯಾಗಿ ಚರ್ಚಿಸುತ್ತೇನೆ. ನೇರವಾಗಿ ನಾನೇ ಮಾತನಾಡೋದು ತಪ್ಪಾಗುತ್ತದೆ ಎಂದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎಂದು