ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರಿದರೆ ಸ್ವಾಗತಿಸುತ್ತೇವೆ. ಅವರ ಬರುವಿಕೆಯಿಂದ ಪಕ್ಷಕ್ಕೆ ಆನೆ ಬಲ ಬರಲಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತೊರೆದಿರುವ ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದಿಂದ ಬಿಜೆಪಿ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ