ಕಲಬುರಗಿ : ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಹೀಗಾಗಿ ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು