ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು