ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕರವೇ ಅಧ್ಯಕ್ಷ ನಾರಾಯಣಗೌಡ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಂಸದರು ನರಸತ್ತವರು. ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದರು. ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶವನ್ನು ನಾವು ಧಿಕ್ಕರಿಸುತ್ತೇವೆ. ನಮ್ಮಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಧಿಮಾಕು ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಧಿಮಾಕು ಮಾಡಿಕೊಂಡು ನೀರು ಕೊಡಿ