ಬೆಂಗಳೂರು : ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗಳಿಗೆ ಗೈರಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ನಾನು ಹೋಗಿಲ್ಲ. ಆ ನೋಟಿಸ್ ವಾಪಸ್ ಪಡೆಯಬೇಕು ಅದಕ್ಕೆ ಸಭೆಗೆ ಹಾಜರಾಗ್ತಿಲ್ಲ.ನಾನು ಏನು ಹೇಳಬೇಕೊ ಅದನ್ನ ಹೇಳಿದ್ದೀನಿ. ಇದರಿಂದ ನನಗೆ ವೈಯಕ್ತಿಕವಾಗಿ ಯಾವುದೇ ಲಾಭ ಇಲ್ಲಾ ನಷ್ಟನೂ ಇಲ್ಲ.