ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಿಟ್ಟುಕೊಂಡಿರುವಂತಹ ಜಮೀನುಗಳ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಅಕ್ರಮ ಮರಳು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಂದಾಯ, ಪೊಲೀಸ್, ಲೋಕೋಪಯೋಗಿ, ಅರಣ್ಯ, ಆರ್.ಟಿ.ಓ ಇಲಾಖೆಗಳ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ