ಬೆಂಗಳೂರು: ಬಾಗಲಕೋಟೆ ಜಿಲ್ಲೆ ತೇರದಾಳದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ತೇರದಾಳದಿಂದ ಸ್ಪರ್ಧೆ ವಿಚಾರದಲ್ಲಿ ಏನೂ ಸತ್ಯಾಂಶವಿಲ್ಲ. ಎಲ್ಲಾ ಕಡೆಯಿಂದ ಮತದಾರರು ಕರೆಯುತ್ತಿದ್ದಾರೆ. ಆದರೆ ಪ್ರತಿಸಲ ಸ್ಪರ್ಧಿಸುತ್ತಿದ್ದ ನಮ್ಮ ಶಿಕಾರಿಪುರ ಕ್ಷೇತ್ರವನ್ನು ನೀವು ಹೇಗೆ ಬಿಟ್ಟು ಹೋಗುತ್ತೀರಿ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.ಮುಂದೆ ಹೈಕಮಾಂಡ್ ಜತೆ ಚರ್ಚಿಸಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎನ್ನುವುದನ್ನು