ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಜಾಪ್ರಭುತ್ವದಲ್ಲಿ ವಿಧಾನ ಮಂಡಲದ ಸರ್ವಾನುಮತದ ನಿರ್ಣಯ ಪ್ರಮುಖವಾದದ್ದು. ಹೀಗಾಗಿ ನ್ಯಾಯಾಂಗ ನಿಂದನೆಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾದ ಸರ್ವಾನುಮತದ ನಿರ್ಣಯವನ್ನು ನಾವು ಪಾಲಿಸಲೇಬೇಕಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ವಿಧಾನ ಮಂಡಲದ ಸರ್ವಾನುಮತದ ನಿರ್ಣಯ ಪ್ರಮುಖ. ಹೀಗಾಗಿ ಯಾವುದೇ ನ್ಯಾಯಾಂಗ ನಿಂದನೆಯಾಗಲು ಸಾಧ್ಯವಿಲ್ಲ ಎಂದರು. ಕಾವೇರಿ ವಿವಾದದ ವಿಚಾರಣೆ