ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ. ಆವಾಗ ಏಕೆ ಅಭಿವೃದ್ಧಿ ಮಾಡಲಿಲ್ಲ...? ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ನಮ್ಮ ನಿಲುವು ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬಾರದು. ಅಖಂಡ ಕರ್ನಾಟಕ ಆಗಿರಬೇಕು. ಪ್ರತ್ಯೇಕ ರಾಜ್ಯ ಎನ್ನುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಸಭಾಪತಿ ಬಸವರಾಜ ಹೊರಟ್ಟಿ ವ್ಯಕ್ತಪಡಿಸಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ ಉತ್ತರ ಕರ್ನಾಟಕದ ಒಂದು ಜಿಲ್ಲೆಯಲ್ಲಿ ಸಭೆ ಕರೆಯಲು ನಿರ್ಧಾರ ಮಾಡಿದ್ದಾರೆ. ನಾನು