ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.ರಾಜ್ಯದ ಲೋಕಸಭಾ ಚುನಾವಣೆ ಉಸ್ತುವಾರಿ ಹೊತ್ತಿರುವ ವಿನೋದ್ ತಾವ್ಡೆ ಯಿಂದ ಮಹತ್ವದ ಸಭೆಯನ್ನ ಬಿಜೆಪಿ ಕಚೇರಿಯಲ್ಲಿ ನಡೆಸಲಾಗಿದೆ.ಮಾಜಿ ಸಚಿವ ಅಶ್ವಥ್ ನಾರಾಯಣ್ ಸೇರಿ ಮೂರು ಕ್ಷೇತ್ರಗಳ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿನ ಪಕ್ಷದ ಪರಿಸ್ಥಿತಿ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ.