ಇಂದಿರಾ ಕ್ಯಾಂಟಿನ್ ಅನ್ನು ಬಿಜೆಪಿ ಸಚಿವರೊಬ್ಬರು ಉದ್ಘಾಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಅಂಕೋಲಾದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಕ್ಕರೆ ಮತ್ತು ಕಾರ್ಮಿಕರ ಸಚಿವ ಶಿವರಾಂ ಹೆಬ್ಬಾರ್ ಉದ್ಘಾಟಿಸಿದ್ದಾರೆ. ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಸಚಿವರು, ಯಾರೊಬ್ಬರು ಕೂಡಾ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ತಾಲೂಕಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಿದೆ. ಸುಮಾರು 75 ಲಕ್ಷಕ್ಕೂ ಹೆಚ್ಚು ಹಣ