Widgets Magazine

ಐಟಿ ದಾಳಿ: ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ 12 ಕೆಜಿ ಚಿನ್ನ, 165 ಕೋಟಿ ನಗದು ಪತ್ತೆ!

ಬೆಳಗಾವಿ| Vinod| Last Modified ಮಂಗಳವಾರ, 24 ಜನವರಿ 2017 (09:59 IST)
ಐಟಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಮುಖ್ಯಮಂತ್ರಿ ಸಂಪುಟದ ಸಣ್ಣ ಕೈಗಾರಿಕೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ 12 ಕೆಜಿ ಚಿನ್ನ ಹಾಗೂ 165 ಕೋಟಿ ರೂಪಾಯಿ ಅಘೋಷಿತ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ಸೇರಿದಂತೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ಜನವರಿ 19 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. 
 
ಬೆಳಗಾವಿ ನಗರದಲ್ಲಿರುವ ಲಕ್ಷ್ಮೀ ಹೆಬಾಳ್ಕರ್, ಗೋಕಾಕ ಪಟ್ಟಣದಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ, ಸಹೋದರ ಲಖನ್ ಜಾರಕಿಹೊಳಿ, ಆಪ್ತ ಅಲಿ ಅತ್ತಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮುಲ್ಲಾ ನಿವಾಸದ ಮೇಲೆ ದಾಳಿ ನಡೆದಿತ್ತು. 
 
ಕಾರ್ಖಾನೆಗಳ ವ್ಯವಹಾರ ಹಾಗೂ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :