ಭಾರತದಲ್ಲಿ ಕೊರೊನಾ ಪ್ರಕರಣಗಳು ಕ್ರಮೇಣವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,300 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ದಿನಗಳಲ್ಲೇ ಅತ್ಯಧಿಕ ಪ್ರಕರಣ ಇದಾಗಿದೆ. ಭಾರತದಲ್ಲಿ 4.46 ಕೋಟಿ ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ, ಇದುವರೆಗೆ 5,30,816 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದಲ್ಲಿ 7,605 ಸಕ್ರಿಯ ಪ್ರಕರಣಗಳಿವೆ, ಕೋವಿಡ್ ಪತ್ತೆಗಾಗಿ ಇದುವರೆಗೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ