ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಏರಿಕೆಯಾಗಿದ್ದು, 54,311 ಕ್ಯೂಸೆಕ್ ನೀರು ಹರಿದು ಬರುತ್ತಿದೆ.ಸದ್ಯ ಕಳೆದೆರಡು ದಿನಗಳಿಂದ ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.ಒಳ ಹರಿವು ಏರಿಕೆಯಾಗುತ್ತಿದ್ದಂತೆ ಹೊರ ಹರಿವಿನ ಪ್ರಮಾಣವನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ. ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಕಾರಣ ಡ್ಯಾಂನಿಂದ