ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ಕೆಎಸ್ಪಿಸಿಬಿ ಅಧ್ಯಯನದಲ್ಲಿ ಆಶ್ಚರ್ಯಕರ ಸಂಗತಿ ಬಯಲಾಗಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬವೇ ಕಾರಣವಾಗಿದೆ ಎಂದು ತಿಳಿದುಬಂದಿದೆ.