ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿದ್ದು, ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಂದೆಡೆ ಕೋವಿಡ್, ಡೆಲ್ಟಾ, ಡೆಲ್ಟಾ ಪ್ಲಸ್ ಅಟ್ಟಹಾಸದ ನಡುವೆ ನಿಫಾ ಆತಂಕ ಕೂಡ ಆರಂಭವಾಗಿದೆ. ಈ ನಡುವೆ ಡೆಂಘೀ ಕೇಸ್ ಹೆಚ್ಚುತ್ತಿದ್ದು, ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ 893 ಡೆಂಘೀ ಪ್ರಕರಣಗಳು ದಾಖಲಾಗಿವೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 446 ಡೆಂಘೀ ಪ್ರಕರಣಗಳು ವರದಿಯಾಗಿದ್ದು,