ಬೆಂಗಳೂರು : ಭಾರತ ಇಂದು 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಶುಭದಿನದಲ್ಲಿ ರಾಜಕೀಯ ಗಣ್ಯರಾದ ನರೇಂದ್ರ ಮೋದಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಅನೇಕರು ಟ್ವಿಟ್ಟರ್ನಲ್ಲಿ ಶುಭಹಾರೈಸಿದ್ದಾರೆ. 77ನೇ ಸ್ವಾತಂತ್ರ್ಯ ದಿನದ ಹಿನ್ನೆಲೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳು. ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ಕನಸನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಜೈ ಹಿಂದ್ ಎಂದು