ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಟುಕಟ್ಟಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅನುಕೂಲವಾಗುವ ಹಾಗೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗುತ್ತದೆ. ಆದರೆ ಅಧಿಕಾರಿಗಳು ಸಭೆಗೆ ಬರದಿದ್ದರೆ ಹೇಗಾಗಬೇಡ? ಹೀಗಾಗಿ ಅಧಿಕಾರಿಗಳ ಗೈರುಹಾಜರಿಗೆ ಅಸಮಧಾನಗೊಂಡ ಜಿಲ್ಲಾಧಿಕಾರಿಯು ಅಧಿಕಾರಿಗಳ ವಿರುದ್ಧ ಛಾಟಿ ಬೀಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯನ್ನು ಹಗುರವಾಗಿ ತಿಳಿದು ಪೂರ್ವಭಾವಿ ಸಿದ್ಧತಾ ಸಭೆಗೆ ಗೈರು ಹಾಜರಾದ 22 ಅಧಿಕಾರಿಗಳಿಗೆ ನೋಟೀಸು ಜಾರಿ ಮಾಡುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ