ಭಾರತ ಬಂದ್ ಗೆ ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತ್ ಬಂದ್ ಹಿನ್ನಲೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಗಾಂಧಿ ಮೈದಾನದಿಂದ ಸಿಹಿ ನೀರಿನ ಬಾವಿ ಅಂಬಿಗರ ಚೌಡಯ್ಯ ವೃತ್ತ, ಮತ್ತು ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಮತ್ತು