ನೋಟು ನಿಷೇಧದಿಂದ ದೇಶದ ಆರ್ಥಿಕತೆ ಬುಡಮೇಲಾಗಿದೆ. ಸ್ವಾತಂತ್ರ್ಯ ಬಂದು 70 ವರ್ಷಗಳ ಅವಧಿಯಲ್ಲಿ ಇಂತಹ ಆರ್ಥಿಕ ದಿವಾಳಿತನ ಆಗಿರಲಿಲ್ಲ. ನೋಟು ನಿಷೇಧದಂತಹ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ದೇಶದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ವಾಗ್ದಾಳಿ ನಡೆಸಿದರು. ನೋಟು ನಿಷೇಧ ಹಾಗೂ ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು.