ಮುಂಬೈ : ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಮಂಗಳವಾರ ಮುಂಬೈನಲ್ಲಿ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ನೀಡಿದ್ದಾರೆ. ಆ ವೇಳೆ ಪ್ರಶಸ್ತಿ ಸ್ವೀಕರಿಸಲು ರತನ್ ಟಾಟಾ ಅವರು