ನಗರದಲ್ಲಿಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಸಂಬಂಧ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಕಂಟ್ರೋಲ್ ರೂಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಕಂಟ್ರೋಲ್ ರೂಂಗಳಲ್ಲಿ ಬರುವಂತಹ ದೂರುಗಳನ್ನು ಸ್ವೀಕರಿಸಿದ ಕೂಡಲೆ ದೂರುಗಳಿಗೆ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳ ಗಮನಕ್ಕೆ ತಂದು