ಬೆಂಗಳೂರು: ದೇಶದಾದ್ಯಂತ ನೋಟು ನಿಷೇಧ ವಿರೋಧಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಾಳೆ ಕರೆಕೊಟ್ಟಿರುವ ಭಾರತ ಬಂಧ್ ರಾಜ್ಯದಲ್ಲಿ ಅಷ್ಟಾಗಿ ಕಾಡದು. ರಾಜ್ಯ ಸರ್ಕಾರದಿಂದ ಯಾವುದೇ ಸ್ಪಷ್ಟ ಸೂಚನೆ ಬರದ ಹಿನ್ನಲೆಯಲ್ಲಿ ಕೆಎಸ್ಆರ್ ಟಿಸಿ, ಬಿಎಂಟಿಸಿ ಮತ್ತು ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಬಂಧ್ ಗೆ ಸರ್ಕಾರದ ಬೆಂಬಲವಿಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಬಂಧ್ ಆಚರಿಸುವುದಾಗಿ ಹೇಳಿಕೊಂಡಿದೆ.