ನಗರದ ಹೆಣ್ಣೂರು ಜಂಕ್ಷನ್ ಬಳಿಯ ಹೊರ ವರ್ತುಲ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಸರ್ವೀಸ್ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ಈ ಸಂಬಂಧ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಕೆಲಸ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.