ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಕಿತ್ತಾಟ ಅತಿರೇಕಕ್ಕೇರಿದ ಬೆನ್ನಲ್ಲೇ ಇಬ್ಬರಿಗೂ ನೋಟಿಸ್ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ವಂದಿತಾ ಅವರಿಗೆ ಸೂಚಿಸಿದ್ದಾರೆ.ಈಗ ನಡೆಯುತ್ತಿರುವ ಇಬ್ಬರ ಕಚ್ಚಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇವತ್ತೇ ಇಬ್ಬರಿಗೂ ಸ್ಪಷ್ಟನೆ ಕೇಳಿ ನೋಟಿಸು ಜಾರಿಗೊಳಿಸುವ ಸಾಧ್ಯತೆಯಿದೆ.ಅಧಿಕಾರಿಗಳ ನಡುವಿನ ಕಿತ್ತಾಟದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳ ಈ ವರ್ತನೆಗಳಿಂದ ನನಗೆ